ದಕ್ಷಿಣ ಭಾರತದಲ್ಲಿ ಮೊದಲ ಸಲ ನಿಫಾ ವೈರಸ್ ರೋಗ 2018ರ ಮೇ 19ರಂದು ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಬಳಿಕದ ಒಂದು ತಿಂಗಳ ಅವಧಿಯಲ್ಲಿ ಕೇರಳದಲ್ಲಿ 17 ಮಂದಿ ನಿಫಾಗೆ ಬಲಿಯಾದರೆ 18 ಮಂದಿಗೆ ನಿಫಾ ದೃಢಪಟ್ಟಿತ್ತು. ಇದಾದ ಬಳಿಕ ಸೋಂಕನ್ನು ನಿಯಂತ್ರಣಕ್ಕೆ ತರುವಲ್ಲಿ ಕೇರಳ ಸರ್ಕಾರ ಯಶಸ್ವಿಯಾಗಿತ್ತು.
ಇದೀಗ ಕೇರಳದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ಈ ನಡುವೆ ಕೇರಳದ ರಾಜ್ಯದ ಕೋಝಿಕ್ಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನೆಂದು ಆರೋಗ್ಯ ಇಲಾಖೆ ಹೇಳಿದೆ.
ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಾಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿತ್ತು. ಇದೀಗ ಪುಣೆಯ The National Institute of Virology ನಿಫಾ ಪಾಸಿಟಿವ್ ಎಂದು ಹೇಳಿದೆ.
ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಬಗ್ಗೆ ಕೇರಳ ಸರ್ಕಾರ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಈ ನಡುವೆ ಕೇರಳ ಆರೋಗ್ಯ ಸಚಿವರು ಸೋಂಕು ಕಾಣಿಸಿಕೊಂಡಿರುವ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆಗಳಿದೆ.
Discussion about this post