ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗವಾದ ಬೆನ್ನಲ್ಲೇ, ಹಲವಾರು ಸಚಿವರು ಕೋರ್ಟ್ ಮೆಟ್ಟಿಲು ಹತ್ತಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.
ಈ ನಡುವೆ ಇದೇ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋದ ಸಚಿವ ಎಸ್.ಟಿ. ಸೋಮಶೇಖರ್ ತಾವೇ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಬಹಿರಂಗಗೊಳಿಸಿರುವವರು ಕಾಂಗ್ರೆಸ್ ನವರು ಎಂದು ಆರೋಪಿದ್ದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ನವರು ಇದರಲ್ಲಿ ನಿಸ್ಸೀಮರು ಎಂದು ಆರೋಪಿಸಿದ್ದರು.
ಇದೀಗ ಸೋಮಶೇಖರ್ ವಿರುದ್ದ ತಿರುಗಿ ಬಿದ್ದಿರುವ ಕೆಪಿಸಿಸಿ, ಟ್ವೀಟರ್ ನಲ್ಲಿ ತಿರುಗೇಟು ನೀಡಿದೆ.
ಸರಣಿ ಟ್ವೀಟ್ ಗಳನ್ನು ಈ ಸಂಬಂಧ ಮಾಡಲಾಗಿದ್ದು, ಒಂದರಲ್ಲಿ ಸಿಡಿ ಮಾಡಿದ್ದು ಕಾಂಗ್ರೆಸ್ ನವರೇ, ನಾನೂ ಕಾಂಗ್ರೆಸ್ ನಲ್ಲಿದ್ದವನೇ ಎಂದಿರುವ ಸಚಿವ ಎಸ್ ಟಿ ಸೋಮಶೇಖರ್ ಅವರೇ. ನೀವೆಷ್ಟು ಸಿಡಿ ಮಾಡಿದ್ದೀರಿ? ನಿಮ್ಮದೆಷ್ಟು ಸಿಡಿ ಇದೆ? ಅದಕ್ಕೆಷ್ಟು ಖರ್ಚು ಮಾಡಿದ್ದೀರಿ? ಬಾಂಬೆಯ ಹೋಟೆಲ್ ನಲ್ಲಿ ಕ್ವಾರೆಂಟೈನ್ ಆಗಿದ್ದಿರಲ್ಲ ಆಗ ನಿಮ್ಮ ಸಿಡಿ ಯಾರು ಮಾಡಿದ್ದು? ಕೋರ್ಟಿಗೆ ಏಕೆ ಅರ್ಜಿ ಏಕೆ ಸಲ್ಲಿಸಿದಿರಿ? ಎಂದು ಪ್ರಶ್ನಿಸಲಾಗಿದೆ.
Discussion about this post