ಮೇಷ
ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು.
4
ವೃಷಭ
ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.
9
ಮಿಥುನ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
2
ಕರ್ಕ
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
7
ಸಿಂಹ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
5
ಕನ್ಯಾ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
8
ತುಲಾ
ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.
3
ವೃಶ್ಚಿಕ
ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ.
4
ಧನು
ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು.
6
ಮಕರ
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರ ಪ್ರಯಾಣ ಯೋಗವಿದೆ.
9
ಕುಂಭ
ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.
1
ಮೀನ
ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ.
5
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
Discussion about this post