ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗ. ಕೌಟುಂಬಿಕ ಸಮಸ್ಯೆಗಳು ದೂರ. ಕೊಟ್ಟಸಾಲ ಪಾವತಿಯಾಗುವುದು.
9
ವೃಷಭ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
1
ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು.
6
ಕರ್ಕ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
3
ಸಿಂಹ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣ ಬಲ ಕೂಡಿಬರುವುದು.
8
ಕನ್ಯಾ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ.
5
ತುಲಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಿಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.
4
ವೃಶ್ಚಿಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು.
7
ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
2
ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ.
8
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
3
ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು.
4
Discussion about this post