ಚೀನಾದ ಹೆನಾನ್ ಪ್ರದೇಶದ ಝೆಚೆಂಗ್ ಪ್ರಾಂತ್ಯದಲ್ಲಿರುವ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಅಗ್ನಿ ಅನಾಹುತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ 18 ಮಂದಿ ಮಕ್ಕಳು ಮೃತಪಟ್ಟಿದ್ದು, 16ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರೆಲ್ಲರೂ 7 ರಿಂದ 16 ವರ್ಷ ವಯಸ್ಸಿನ ಮಕ್ಕಳು ಎಂದು ಗೊತ್ತಾಗಿದ್ದು, ಇವರೆಲ್ಲರೂ ಶಾಂಗ್ ಕ್ಯೂ ನಗರಕ್ಕೆ ಮಾರ್ಷಲ್ ಆರ್ಟ್ ಕಲಿಯಲು ಬಂದಿದ್ದರು ಎಂದು ಗೊತ್ತಾಗಿದೆ.
ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ.ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 16 ಮಂದಿಯ ಪೈಕಿ ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Discussion about this post