ಉಡುಪಿ : ಕೊಲ್ಲೂರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಪಶು ವೈದ್ಯಾಧಿಕಾರಿಯಾಗಿರುವ ಡಾ. ವಿವೇಕಾನಂದ ಶೆಟ್ಟಿ ಪಶು ಚಿಕಿತ್ಸಾಲಯದಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಯುಕ್ತಿಕ ಕಾರಣಗಳಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳು ಇದೆ ಎನ್ನಲಾಗಿದೆ.
ಪ್ರಾಥಮಿಕ ಪಶು ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಒಳಗಿನಿಂದ ಚಿಲಕ ಹಾಕಿಕೊಂಡು ಆಸ್ಪತ್ರೆಯ ಸ್ಟಾಕ್ ರೂಮ್ ನಲ್ಲಿ ಬ್ಲೆಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೊಲ್ಲೂರು ಪೊಲೀಸ್ ಠೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post