crossorigin="anonymous"> love you racchu ಶೂಟಿಂಗ್ ದುರಂತ :ವಿಚಾರಣೆಗೆ ಬಿಡದಿ ಪೊಲೀಸರ ಮುಂದೆ ಹಾಜರಾದ ರಚಿತಾ ರಾಮ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

love you racchu ಶೂಟಿಂಗ್ ದುರಂತ :ವಿಚಾರಣೆಗೆ ಬಿಡದಿ ಪೊಲೀಸರ ಮುಂದೆ ಹಾಜರಾದ ರಚಿತಾ ರಾಮ್

ಆ ಜಾಗದಲ್ಲಿ ನಾನು ಇರಲಿ, ಇಲ್ಲದಿರಲಿ. ನಮ್ಮ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೊಬ್ಬರು ದುರ್ಘಟನೆಗೆ ಬಲಿಯಾಗಿದ್ದಾರೆ ಅನ್ನೋ ನೋವು ನನ್ನನ್ನು ಕಾಡುತ್ತಿದೆ

Radhakrishna Anegundi by Radhakrishna Anegundi
24-08-21, 7 : 12 pm
in ಮನೋರಂಜನೆ
rachitha 01
Share on FacebookShare on TwitterWhatsAppTelegram

ಬಿಡದಿ : ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಫೈಟರ್ ವಿವೇಕ್ ಸಾವಿನ ಕುರಿತಂತೆ ಬಿಡದಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಹೊಣೆಗಾರಾದ ಕೆಲರನ್ನು ಬಂಧಿಸಿ ಜೈಲಿಗಟ್ಟಿಲಾಗಿದೆ. ಇನ್ನು ಕೆಲವರು ತಲೆ ಮರೆಸಿಕೊಂಡಿದ್ದು, ಅವರಿಗೆ ಶೋಧ ನಡೆಯುತ್ತಿದೆ.

ಈ ನಡುವೆ love you racchu ಸಿನಿಮಾದ ನಾಯಕಿ ರಚಿತಾ ರಾಮ್ ಅವರನ್ನು ಬಿಡದಿ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಈ ಸಂಬಂಧ ಇಂದು ಸಂಜೆ ಬಿಡದಿ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿರುವ ಅವರು ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಘಟನೆ ನಡೆದಾಗ ನೀವಿದ್ರ, ಒಂದು ವೇಳೆ ನೀವು ಅಲ್ಲಿದ್ರೆ ಏನಾಯ್ತು, ಯಾರ ತಪ್ಪು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ ಹೀಗೆ ಹಲವು ಪ್ರಶ್ನೆಗಳನ್ನು ಕೇಳುವ ಸಾಧ್ಯತೆಗಳಿದೆ. ಆದರೆ ಈಗಾಗಲೇ ರಚಿತಾ ರಾಮ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ರಚಿತಾ ರಾಮ್ ಸ್ಥಳದಲ್ಲಿ ಇರಲಿಲ್ಲ.  ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸುದೀರ್ಘ ಪತ್ರವೊಂದನ್ನು ಬರೆದಿದ್ದರು.

“ ಎಲ್ಲರಿಗೂ ನಮಸ್ಕಾರ. ನೀವೆಲ್ಲರೂ ಕ್ಷೇಮವಾಗಿದ್ದೀರಿ ಅಂತಾ ನಂಬಿದ್ದೀನೆ. ದಯವಿಟ್ಟು ಎಲ್ಲರೂ ಹುಷಾರಾಗಿರಿ ಅಂತ ನಿಮ್ಮಲ್ಲರಲ್ಲಿ ನಾನು ರಿಕ್ವೆಸ್ಟ್​ ಮಾಡ್ತೀನಿ. ಲವ್​ ಯೂ ರಚ್ಚು ಸೆಟ್​ನಲ್ಲಿ ಒಂದು ನಡೀಬಾರದ ಘಟನೆ ನಡೆದಾಗಿಂದ ಆ ಆಘಾತ ನನ್ನನ್ನು ಸೈಲೆಂಟ್​ ಆಗಿರುವ ಹಾಗೆ ಮಾಡಿತ್ತು. ನನ್ನ ಮೌನ ಕೆಲವರಿಗೆ ತಪ್ಪಾಗಿ ಅರ್ಥವಾಗಿದೆ. ತಪ್ಪಾಗಿ ಬಳಕೆ ಆಗ್ತಾ ಇದೆ. ಇದು ನನಗೆ ನಿಜಕ್ಕೂ ನೋವು ಕೊಟ್ಟಿದೆ. ಆ ದುರ್ಘಟನೆ ನಡೆದಾಗ ನಾನು ಸೆಟ್​ನಲ್ಲಿ ಇರ್ಲಿಲ್ಲ. ಆಗಿದ್ದಂತು ಸತ್ಯ. ಆಗಸ್ಟ್​ 2ನೇ ತಾರೀಕಿನಿಂದ ನಾನು ಶಬರಿ ಸಿನಿಮಾ ಶೂಟಿಂಗ್​ಗೋಸ್ಕರ ಮೈಸೂರಿನಲ್ಲಿದ್ದೆ. ಆಗ ಘಟನೆ ನಡೆದಾಗ ನಾನು ಆ ಜಾಗದಲ್ಲಿ ಇರಲಿಲ್ಲ. ಸತ್ಯವನ್ನು ಒಂದೇ ಒಂದು ಸಲ ಪುನರ್​ ಪರಿಶೀಲಿಸಿದ್ರೆ ನನ್ನ ಬಗ್ಗೆ ಕೆಟ್ಟ ಕಮೆಂಟ್​ಗಳನ್ನು ಬರೆಯುೋ, ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಪ್ರಮೇಯ ಒದಗಿ ಬರುತ್ತಿರಲಿಲ್ಲ ಎನಿಸುತ್ತೆ.

ಆ ಜಾಗದಲ್ಲಿ ನಾನು ಇರಲಿ, ಇಲ್ಲದಿರಲಿ. ನಮ್ಮ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೊಬ್ಬರು ದುರ್ಘಟನೆಗೆ ಬಲಿಯಾಗಿದ್ದಾರೆ ಅನ್ನೋ ನೋವು ನನ್ನನ್ನು ಕಾಡುತ್ತಿದೆ. ಆ ಕುಟುಂಬಕ್ಕೆ ಆಗಿರುವ ನಷ್ಟಕ್ಕೆ ನನ್ನ ವಿಷಾದವಿದೆ. ಈ ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ಭಗವಂತ ನೀಡಲಿ ಅಂತ ನಾನು ಬೇಡಿಕೊಳ್ತೀನಿ. ನನ್ನ ಬೆಳೆಸಿರುವ ಜನರು ನನ್ನ ಮಾತುಗಳನ್ನು, ನನ್ನನ್ನು ನಂಬುತ್ತಾರೆ ಅಂತ ನಂಬಿದ್ದೇನೆ. ಆರೋಪಗಳು ಏನೇ ಇದ್ರೂ, ಸರಿ-ತಪ್ಪುಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ ಅಂತಾನೂ ನಂಬಿದ್ದೇನೆ ಎಂದು ರಚಿತಾ ಇನ್ಸ್ಟಾ ಪೋಸ್ಟ್ ನಲ್ಲಿ ಹೇಳಿದ್ದರು.

View this post on Instagram

A post shared by Rachita Ram (@rachita_instaofficial)

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಸಿನಿಮಾ ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶಿಸಿದೆ.

Tags: Rachitha Ram
Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್