ಬೆಂಗಳೂರು : ರಾಜ್ಯದ ಬಡವರ ಹಾಗೂ ಮಧ್ಯಮ ವರ್ಗದವರ ಅದರಲ್ಲೂ ಯುವಜನತೆಯ ರಕ್ತ ಹೀರುತ್ತಿರುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಕನ್ನಡ ನಟ ನಟಿಯರು ಪ್ರಮೋಟ್ ಮಾಡುತ್ತಿದ್ದ ಆನ್ ಲೈನ್ ಗೇಮ್ ಗಳಿಗೆ ಕಡಿವಾಣ ಬೀಳಲಿದೆ.
ಈ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದು, ಇಂದು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಹುತೇಕ ಸಚಿವರು ಆನ್ ಲೈನ್ ಗೇಮ್ ನಿಷೇಧ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ನಿಷೇಧಕ್ಕೆ ಒತ್ತಾಯಿಸಿದ್ದಾರೆ. ಈ ಸಂಬಂಧ ಸದನದಲ್ಲಿ ತಿದ್ದುಪಡಿ ಕಾಯ್ದೆ ಮಂಡೆನೆಯಾಗಲಿದೆ ಅಂದರು.
ಈ ಹಿಂದೆಯೇ ಈ ಗೇಮ್ ಗಳನ್ನು ನಿಷೇಧಿಸಬೇಕು ಅನ್ನುವ ಆಗ್ರಹ ಕೇಳಿ ಬಂದಿದ್ದು, ಆದರೆ ಯಾವ ಸರ್ಕಾರವೂ ಈ ಬಗ್ಗೆ ಗಮನ ಕೊಟ್ಟಿರಲಿಲ್ಲ. ಬೊಮ್ಮಾಯಿ ಸಂಪುಟದ ಈ ನಿರ್ಧಾರ, ಹೊಸ ಸರ್ಕಾರದ ಮೇಲೆ ಹೊಸ ನಿರೀಕ್ಷೆಗಳನ್ನು ಮೂಡಿಸಿದೆ.
Discussion about this post