crossorigin="anonymous"> ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Radhakrishna Anegundi by Radhakrishna Anegundi
31-10-23, 9 : 00 am
in ಟಾಪ್ ನ್ಯೂಸ್, ರಾಜ್ಯ
karnataka-rajyotsava-award-to-be-given
Share on FacebookShare on TwitterWhatsAppTelegram

Karnataka Rajyotsava ಪ್ರಶಸ್ತಿ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ

Kannada rajyotsava ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರತೀ ವರ್ಷ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಕೆಲವು ವರ್ಷಗಳಲ್ಲಿ ಅರ್ಹರಿಗೆ ಪ್ರಶಸ್ತಿ ಸಂದಾಯವಾಗಿಲ್ಲ ಅನ್ನುವ ಆರೋಪಗಳೂ ಕೇಳಿ ಬಂದಿತ್ತು. ಹಾಗಂತ ಸಾಧಕರಿಗೆ ಸಲ್ಲಬೇಕಾದ ಪ್ರಶಸ್ತಿ ಲಾಭಿಯಿಂದ ಇನ್ನೂ ಮುಕ್ತಾಯವಾಗಿಲ್ಲ ಅನ್ನುವುದು ದುರಂತ.

ಈ ನಡುವೆ ಈ ವರ್ಷ 25 ಸಾವಿರ ಮಂದಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದು, ಅದನ್ನು ಈಗ 68ಕ್ಕೆ ಇಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಸ್ ನಡೆಸಿದೆ. ಸಾಧನೆಯಲ್ಲೂ ಧರ್ಮ, ಜಾತಿ, ಪ್ರಾದೇಶಿಕವಾರು, ಸಾಹಿತ್ಯ, ಸಮಾಜ ಸೇವೆ, ಕಲೆ ಹೀಗೆ ಕ್ಷೇತ್ರವಾರು ವಿಂಗಡಿಸಬೇಕಾಗಿರುವ ಕಾರಣದಿಂದ ಆಯ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ : ಬಯಲಾಯ್ತು ನಟಿ ರೆಂಜೂಷಾ ಮೆನನ್ ( Renjusha Menon) ಆತ್ಮಹತ್ಯೆ ರಹಸ್ಯ

ಈ ಬಾರಿ ಸಾಧಕರನ್ನು ಗುರುತಿಸಲು ಉಪಸಮಿತಿ ರಚಿಸಲಾಗಿದೆ. ಉಪಸಮಿತಿಗಳ ಮೂಲಕ ಅರ್ಜಿಯ ಸಂಖ್ಯೆಯನ್ನು ಗಣನೀಯವಾಗಿ ತಗ್ಗಿಸಲಾಗಿದ್ದು, ಅಂತಿಮ ಪಟ್ಟಿಯನ್ನು ಆಯ್ಕೆ ಸಮಿತಿ ಮುಂದೆ ಇರಿಸಲಾಗಿದೆ. ಈ ನಡುವೆ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಿದ್ದರೂ, ಅರ್ಜಿ ಸಲ್ಲಿಸದ ಅರ್ಹತೆ ಇರುವವರನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವೇ ಒಂದಿಷ್ಟು ಹೆಸರುಗಳನ್ನು ಗುರುತಿಸಿದ್ದು, ಆಯ್ಕೆಯಲ್ಲಿ ಆದ್ಯತೆ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.

siddaramaiah birthday police-case-bbmp

ಅಪ್ರತಿಮ ಸೇವೆಗೈದು, ಎಲೆಮರೆಯ ಕಾಯಿಯಂತೆ ಇರುವವರನ್ನು ಗುರುತಿಸಿದ್ರೆ ಪ್ರಶಸ್ತಿಗೊಂದು ( Kannada rajyotsava) ತೂಕ ಬರುತ್ತದೆ ಅನ್ನುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಸದೇ ಇದ್ದವರಿಗೆ ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದೆಯಂತೆ.

ಈ ನಡುವೆ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ( KARNATAKA) ಎಂದು ನಾಮಕರಣವಾಗಿ 50 ವರ್ಷಗಳು ಸಂದ ಹಿನ್ನಲೆಯಲ್ಲಿ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

Read this : Bigg Boss ಮನೆಗೆ ವರ್ತೂರು ಸಂತೋಷ್

  • ಮನೆ ಮನೆಯಲ್ಲೂ ಕನ್ನಡದ ಬಾವುಟ ಹಾರಲಿ, ಕನ್ನಡ ಜೋತಿ ಬೆಳಗಲಿ ಎಂಬ ಆಶಯದೊಂದಿಗೆ ಈ ಬಾರಿಯ ರಾಜ್ಯೋತ್ಸವ ಆಚರಣೆ ಮನವಿ ಮಾಡಲಾಗಿದೆ. ಈ ಸಂಬಂಧ ಹಲವು ಸೂಚನೆಗಳನ್ನೂ ಕೂಡಾ ನೀಡಲಾಗಿದೆ.
  • ಪ್ರತಿಯೊಬ್ಬ ಕನ್ನಡಿಗನ ಮನೆಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯಲ್ಲಿ 50ರ ಸಂಭ್ರಮ ಎಂದು ಬಿಡಿಸೋದು
  • ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯ ಬರೆಯುವಂತೆ ಮನವಿ.
  • ನವೆಂಬರ್ 1 ರಂದು ಬೆಳಗ್ಗೆ 9ಗಂಟೆಗೆ ರಾಜ್ಯದ ಎಲ್ಲಾ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ.
  • ನಾಡ ಗೀತೆ ಸಂದರ್ಭದಲ್ಲಿ ರಾಜ್ಯದ ಜನ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ
  • ನವೆಂಬರ್ 1 ರಂದು ಸಂಜೆ ಐದು ಗಂಟೆಗೆ ನಾಡಿನ ಜನರೆಲ್ಲರೂ ತಮ್ಮ ಗ್ರಾಮಗಳಲ್ಲಿ ಕನ್ನಡ ಬಾವುಟ ಉಳ್ಳ ಗಾಳಿಪಟ ಹಾರಿಸುವಂತೆ ಮನವಿ
  • ಸಂಜೆ 7 ಗಂಟೆಗೆ ಎಲ್ಲಾ ಮನೆಗಳು, ಅಂಗಡಿ, ಕಚೇರಿಗಳ ಮುಂದೆ ದೀಪ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಲು ಮನವಿ
siddu dkc
    Tags: FEATURED
    ShareTweetSendShare

    Discussion about this post

    Related News

    2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

    2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

    ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

    ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

    ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

    ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

    ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

    ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

    ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

    ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

    ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

    ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

    ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

    ವೆಬ್ ಸ್ಟೋರಿಸ್

    ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
    ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
    By Radhakrishna Anegundi
    On Nov 13, 2023
    ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
    ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
    By Radhakrishna Anegundi
    On Nov 9, 2023
    ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
    ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
    By Radhakrishna Anegundi
    On Nov 4, 2023

    Web Stories

    ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
    ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
    ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
    ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
    ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
    • Advertise
    • About

    © 2024 Torrent Spree - All Rights Reserved | Powered by Kalahamsa Infotech Pvt. ltd.

    No Result
    View All Result
    • ಟಾಪ್ ನ್ಯೂಸ್
    • ಟ್ರೆಂಡಿಂಗ್
    • ದಕ್ಷಿಣ ಕನ್ನಡ
    • ನ್ಯೂಸ್ ರೂಮ್
      • ರಾಜ್ಯ
      • ದೇಶ
      • ವಿದೇಶ
    • ಕ್ರೈಮ್
    • ಮನೋರಂಜನೆ
      • ಗಾಂಧಿ ಕ್ಲಾಸ್
      • ಸೀರಿಯಲ್ ಸಂತೆ
    • ಆರೋಗ್ಯ / ಆಹಾರ
    • ಕೃಷಿ
    • ಕ್ರೀಡಾಂಗಣ
    • ದೇವನುಡಿ
    • ಬೆಡ್ ರೂಮ್

    © 2024 Torrent Spree - All Rights Reserved | Powered by Kalahamsa Infotech Pvt. ltd.

    ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
    ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
    • ↓
    • ಗ್ರೂಪ್
    • ಗ್ರೂಪ್