crossorigin="anonymous"> ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Radhakrishna Anegundi by Radhakrishna Anegundi
07-11-23, 10 : 22 am
in ಟಾಪ್ ನ್ಯೂಸ್, ರಾಜ್ಯ
chikkamagaluru d-b-chandregowda-passes-away
Share on FacebookShare on TwitterWhatsAppTelegram

ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ತ್ಯಾಗ ಮಾಡಿದ್ದ ಡಿ.ಬಿ.ಚಂದ್ರೇಗೌಡ ( D. B. Chandregowda )

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ (DB Chandregowda) ಸೋಮವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡರು ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನ ಪಡೆಯಬಹುದಾಗಿದೆ. ನಾಳೆ (ನವೆಂಬರ್ 08 ಬುಧವಾರ ) ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ : ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

ಡಿಬಿಎಸ್ ಎಂದೇ ಹೆಸರಾಗಿರುವ ಚಂದ್ರೇಗೌಡರು, ಭೈರೇಗೌಡ ಮತ್ತು ಪುಟ್ಟಮ್ಮ ಅವರ ಪುತ್ರರಾಗಿ 1936ರ ಆಗಸ್ಟ್ 26ರಂದು ಜನಿಸಿದ್ದರು. ಕಾನೂನು ಪದವಿ ಪಡೆದು ವಕೀಲರಾಗಿದ್ದ ಚಂದ್ರೇಗೌಡರು, 1971ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ರಂಗ ಪ್ರವೇಶಿಸಿದರು. 1971ರಲ್ಲಿ ಮೊದಲ ಬಾರಿಗೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದರು.

1977ರಲ್ಲಿ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿದ್ದ ಚಂದ್ರೇಗೌಡರು 1978ರಲ್ಲಿ ಇಂದಿರಗಾಂಧಿ ಅವರಿಗೆ ಸ್ಪರ್ಧಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮಾತ್ರವಲ್ಲದೆ ಇಂದಿರಾಗಾಂಧಿ ಗೆಲುವಿಗಾಗಿ ಸಾಕಷ್ಟು ಶ್ರಮಿಸಿದ್ದರು ಮತ್ತು ಆ ಕಾರಣಕ್ಕಾಗಿ ದೇಶದೆಲ್ಲೆಡೆ ಸುದ್ದಿಯಾಗಿದ್ದರು ಕೂಡಾ.

  • 1971 : ಚಿಕ್ಕಮಗಳೂರು ಕ್ಷೇತ್ರದಿಂದ ಸಂಸತ್ ಪ್ರವೇಶ
  • 1977 : ಎರಡನೇ ಬಾರಿಗೆ ಸಂಸದರಾಗಿ ಆಯ್ಕೆ
  • 1978 : ಇಂದಿರಾಗಾಂಧಿಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ
  • 1979–80 : ವಿಧಾನಪರಿಷತ್ ಸದಸ್ಯ ಹಾಗೂ ನೀರಾವರಿ ಸಚಿವ
  • 1980–81 :  ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕ
  • 1983 : ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
  • 1983-85 : ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಣೆ
  • 1986 : ರಾಜ್ಯಸಭಾ ಸದಸ್ಯರಾಗಿ ಆಯ್ಕೆ
  • 1987 : ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ
  • 1999 : ಶೃಂಗೇರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
  • 1999 – 2004 : ಕಾನೂನು ಸಚಿವರಾಗಿ ಕಾರ್ಯನಿರ್ವಹಣೆ
  • 2009 :  ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ
  • 2014 : ಸಕ್ರಿಯ ರಾಜಕೀಯದಿಂದ ನಿವೃತ್ತಿ

ಆದಾದ ನಂತರ ವಿಧಾನ ಪರಿಷತ್ ಸದಸ್ಯರಾದ ಚಂದ್ರೇಗೌಡರು, ದೇವರಾಜು ಅರಸು ಅವರ ಸಂಪುಟದಲ್ಲಿ 1979ರಿಂದ 1980ರ ತನಕ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಬದಲಾದ ರಾಜಕೀಯ ಪರಿಸ್ತಿತಿಯಲ್ಲಿ ದೇವರಾಜು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡ ಅವರು 1980-81ರ ಅವಧಿಗೆ ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಣಕ್ಕಿಳಿದ ಅವರು ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983 ರಿಂದ 1985ರ ತನಕ ವಿಧಾನಸಭಾ ಸ್ಪೀಕರ್ ಆಗಿಯೂ ಚಂದ್ರೇಗೌಡರು ಕಾರ್ಯನಿರ್ವಹಿಸಿದ್ದರು.

Read More : Jet airwaysನ 538 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.

1999ರಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಚಂದ್ರೇಗೌಡರು, 1999ರಿಂದ 2004ರ ತನಕ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2009ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಚಂದ್ರೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಭವನ ಪ್ರವೇಶಿಸಿದ್ದರು.

2014ರಲ್ಲಿ ಸಕ್ರಿಯ ರಾಜಕೀಯದಿಂದ ದೂರ ಸರಿದ ಸಮಾಜವಾದಿ ಚಿಂತಕ ಚಂದ್ರೇಗೌಡರು ದಾರದಹಳ್ಳಿಯ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

D. B. Chandregowda with bommai
Tags: ChandregowdadbsFEATUREDಚಂದ್ರೇಗೌಡ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್