crossorigin="anonymous"> Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

Radhakrishna Anegundi by Radhakrishna Anegundi
08-11-23, 9 : 21 am
in ಟಾಪ್ ನ್ಯೂಸ್, ಮನೋರಂಜನೆ
Deep fake video-rashmika-mandanna
Share on FacebookShare on TwitterWhatsAppTelegram

ರಶ್ಮಿಕಾ ಮಂದಣ್ಣ ಅವರ Deep fake video ಸಿಕ್ಕಾಪಟ್ಟೆ ವೈರಲ್ ಆಗಿದೆ

ತಂತ್ರಜ್ಞಾನಗಳು ಮುಂದುವರಿದಷ್ಟು, ಸಂಶೋಧನೆಗಳು ಹೆಚ್ಚಿದಷ್ಟು ಅನುಕೂಲಗಳು ಜಾಸ್ತಿ ಅಂದುಕೊಂಡ್ರೆ, ಅಪಾಯಗಳು ಕೂಡಾ ಅಷ್ಟೇ ಹೆಚ್ಚಾಗುತ್ತಿದೆ. ದುಡ್ಡು ಡ್ರಾ ಮಾಡಲು ಬ್ಯಾಂಕ್ ಗೆ ಹೋಗಿ ಕ್ಯೂ ನಿಲ್ಲೋದನ್ನು ತಪ್ಪಿಸಿದ ಎಟಿಎಂ ಸಿಸ್ಟಮ್ ಕೂಡಾ ಸೇಫ್ ಅನ್ನಿಸಲಿಲ್ಲ. ಎಟಿಎಂ ನಂತ್ರ ಬಂದ ಆನ್ ಲೈನ್ ಹಣ ವರ್ಗಾವಣೆ ವಿಧಾನ ಕೂಡಾ ಇಂದಿಗೂ 100% ಸೇಫ್ ಆಗಿಲ್ಲ. ಈ ಸಾಲಿಗೆ ಮತ್ತೊಂದು ಸೇರ್ಪಡೆ Deep fake video APP. ರಶ್ಮಿಕಾ ಮಂದಣ್ಣ ಅವರು ಇದೇ ಕಾರಣಕ್ಕೆ Viral ಆಗಿದ್ದಾರೆ.

ಸೆಲೆಬ್ರೆಟಿಗಳಂತೆ ಕಾಣಿಸಿಕೊಳ್ಳುವ ಹುಚ್ಚಿರುವ ಮಂದಿಗಾಗಿ Deep fake video APP ಗಳು ಹುಟ್ಟಿಕೊಂಡಿತು. ಆದರೆ ಕಾಲ ಕಳೆದಂತೆ ಅದರ ದುರ್ಬಳಕೆ ಪ್ರಾರಂಭಗೊಂಡಿತು. ಯಾರದ್ದೋ ಬಾಡಿಗೆ,  ಇನ್ಯಾರದ್ದೋ ಮುಖ ಅಂಟಿಸುವ ಕೆಟ್ಟ ಚಾಳಿ ಪ್ರಾರಂಭವಾಯ್ತು. ಅದರಲ್ಲೂ ಮಹಿಳೆಯರ ಪಾಲಿಗೆ ಈ APP ಗಳು ಭಯೋತ್ಪಾದಕರಾಗಿದ್ದು ಸುಳ್ಳಲ್ಲ.

Read this : ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

ಅದೇ ರೀತಿ ಇದೀಗ ಝಾರ ಪಟೇಲ್ (zara patel ) ಅನ್ನುವವರ ವಿಡಿಯೋಗೆ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ವೈರಲ್ ಮಾಡಲಾಗಿದೆ. ತನ್ನದೇ ಆದ ಕಾರಣಕ್ಕೆ ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಸಂಭಾವಿತರು ಅನ್ನಿಸಿಕೊಂಡವರಿಗೆ ಮುಜುಗರ ತರಿಸಿದ್ದು ಸುಳ್ಳಲ್ಲ.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರೋ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್ ವಿಡಿಯೋ ರಶ್ಮಿಕಾ ಅವರಿಗೆ ಮಾತ್ರವಲ್ಲ ಎಲ್ಲಾ ಹೆಣ್ಣುಮಕ್ಕಳಲ್ಲೂ ಆತಂಕ ಸೃಷ್ಟಿಸಿದೆ.

ಇನ್ನು ರಶ್ಮಿಕಾ ಮಂದಣ್ಣ ಅವರು ಈ ವಿಡಿಯೋ ಬಗ್ಗೆ ಮೌನ ಮುರಿದಿದ್ದು. ಇದು ‘ಅತ್ಯಂತ ಭಯಾನಕ’ ಅಂದಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, “ಇದನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗುತ್ತಿದೆ. ಆನ್‌ಲೈನ್‌ನಲ್ಲಿ ಹರಡಿರುವ ನನ್ನ ಡೀಪ್‌ ಫೇಕ್ ವೀಡಿಯೋ ಬಗ್ಗೆ ಮಾತನಾಡಲೇಬೇಕಿದೆ. ಪ್ರಾಮಾಣಿಕವಾಗಿ ಹೇಳುವುದಾದರೆ ತಂತ್ರಜ್ಞಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಅನ್ನುವುದು ಗೊತ್ತಾಗುತ್ತಿದೆ.

Image Credit To Original Source
ರಶ್ಮಿಕಾ ಮಂದಣ್ಣ Deep fake video

“ನನ್ನ ರಕ್ಷಣೆ ಮತ್ತು ಬೆಂಬಲಕ್ಕೆ ನಿಂತ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ಇಂದು ಒಬ್ಬ ಮಹಿಳೆಯಾಗಿ ಮತ್ತು ನಟಿಯಾಗಿ ನಾನು ಕೃತಜ್ಞಳಾಗಿದ್ದೇನೆ. ಆದರೆ ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಹೀಗಾಗಿದ್ದರೆ ನಾನು ಇದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ನನಗೆ ನಿಜವಾಗಿಯೂ ಊಹಿಸೋದಿಕ್ಕೆ ಸಾಧ್ಯವಿಲ್ಲ” ಎಂದು ರಶ್ಮಿಕಾ ಆತಂಕ ವ್ಯಕ್ತಪಡಿಸಿದ್ದಾರೆ.

I feel really hurt to share this and have to talk about the deepfake video of me being spread online.

Something like this is honestly, extremely scary not only for me, but also for each one of us who today is vulnerable to so much harm because of how technology is being misused.…

— Rashmika Mandanna (@iamRashmika) November 6, 2023

ಇನ್ನು ಈ ಬೆಳವಣಿಗೆ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೂಡಾ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಕೈಗೊಳ್ಳಬಹುದಾದ ಕಾನೂನು ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸಿದ್ದಾರೆ.

PM @narendramodi ji's Govt is committed to ensuring Safety and Trust of all DigitalNagriks using Internet

Under the IT rules notified in April, 2023 – it is a legal obligation for platforms to

➡️ensure no misinformation is posted by any user AND

➡️ensure that when reported by… https://t.co/IlLlKEOjtd

— Rajeev Chandrasekhar 🇮🇳 (@Rajeev_GoI) November 6, 2023
Tags: Deep fake videoFEATUREDrashmika mandannaರಶ್ಮಿಕಾ ಮಂದಣ್ಣ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್