ಮುಂಗಾರು ಮಳೆ ಮತ್ತೆ ಅಬ್ಬರಿಸುವ ಸಾಧ್ಯತೆಗಳಿದೆ ಅಂದ ಹವಾಮಾನ ಇಲಾಖೆ
ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Daily weather report of Rainfall stats & WARNINGS
— Karnataka Weather (@Bnglrweatherman) August 3, 2024for #Karnataka via IMD ending 8:30 AM today#OrangeAlert: Dakshina Kannada, Udupi, Uttara Kannada & Shivamogga districts#YellowAlert: Kodagu, Chikkamagaluru & Belagavi districts
No #RedAlert#KarnatakaRains #KodaguRains pic.twitter.com/4ldMAJOnJR
ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು.
ಇನ್ನು ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.