
ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 67 ವರ್ಷದ ಬಿಜೆಪಿ ಸಂಸದೆ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ಧಾರೆ.

ಸುಷ್ಮಾ ಸ್ವರಾಜ್ ಅವರು 1959ರ ಫೆಬ್ರುವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ಜನಿಸಿದರು. ಇವರ ತಂದೆ ಹಾರ್ದೇವ್ ಶರ್ಮಾ ಮತ್ತು ತಾಯಿ ಲಕ್ಷ್ಮಿ ದೇವಿ. ಅವರು ಅಂಬಾಲಾ ಕಂಟೋನ್ಮೆಂಟ್ನ ಸನಾತನ ಧರ್ಮ ಕಾಲೇಜಿನಲ್ಲಿ ಸಂಸ್ಕೃತ ಮತ್ತು ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿಯನ್ನು ಪಡೆದರು. ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಭ್ಯಾಸ ಮಾಡಿದರು. 1973ರಲ್ಲಿ ಭಾರತದ ಸುಪ್ರೀಂಕೋರ್ಟ್ನಲ್ಲಿ ವಕೀಲರಾಗಿ ಅಭ್ಯಾಸ ಆರಂಭಿಸಿದರು

ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.


ಕರ್ನಾಟಕದಲ್ಲಿ ನಂಬಿಕೆ ಅರ್ಹವಾಗಿರುವ ವಾಹಿನಿಗಳು ಸುದ್ದಿಯನ್ನು ಭಿತ್ತರಿಸಿವೆ.
Discussion about this post