ಕಡಪಾ : ಆಂಧ್ರದಲ್ಲಿ ಶಿಕ್ಷಣದ ಗುಣಮಟ್ಟವನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಹಲವು ಕ್ರಮಗಳನ್ನು ಕೈಗೆತ್ತಿಕೊಂಡಿದೆ.
ಇದೀಗ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಆಂಗ್ಲ ಮಾಧ್ಯಮದ ಪ್ರಾಥಮಿಕ ಶಾಲೆಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಹೀಗಾಗಿ ಮಾರ್ಚ್ ತಿಂಗಳಿನಿಂದ ಎಲ್ಲಾ ಅಂಗನವಾಡಿ ಶಾಲೆಗಳು ವೈಎಸ್ಆರ್ ಪ್ರೀ ಪ್ರೈಮರಿ ಶಾಲೆಗಳಾಗಿ ಪರಿವರ್ತನೆಯಾಗಲಿದೆ.

ಇಲ್ಲಿ 3 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಇಂಗ್ಲೀಷ್ ಪದ್ಯ, ಗಣಿತ ಮತ್ತು ವಿಜ್ಞಾನವನ್ನು ಕಲಿಸಲಾಗುತ್ತದೆ.
ಈ ಸಂಬಂಧ ಅಂಗನವಾಡಿ ಸಿಬ್ಬಂದಿಗೆ ಅಗತ್ಯವಾದ ಎಲ್ಲಾ ಕೌಶಲ್ಯ ತರಬೇತಿಗಳನ್ನು ನೀಡಲಾಗಿದೆ.
ಇನ್ನುಳಿದಂತೆ ವೈಎಸ್ಆರ್ ಪ್ರೀ ಪ್ರೈಮರಿ ಶಾಲೆಗಳಲ್ಲಿ ಪೌಷ್ಠಿಕ ಆಹಾರದ ವಿತರಣೆ ಎಂದಿನಂತೆ ನಡೆಯಲಿದೆ. ಜೊತೆಗೆ 9 ರಿಂದ ಮಧ್ಯಾಹ್ನ 1 ಗಂಟೆ ತನಕ ಈ ಶಾಲೆಗಳು ತೆರೆದಿರುತ್ತದೆ.
Discussion about this post