Dog Meat : ಮೂಡಾ ಹಗರಣ ಸಂಬಂಧ ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ ; ಗೃಹ ಸಚಿವ ಡಾ: ಜಿ ಪರಮೇಶ್ವರ್
ಮೂಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಗೃಹ ಸಚಿವ ಡಾ: ಜಿ ಪರಮೇಶ್ವರ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾಂಸ ಮಾರಾಟ ಕುರಿತಂತೆ ಪ್ರತಿಕ್ರಿಯಿಸಿದ ಅವರು ಪ್ರಯೋಗಾಯಲದ ವರದಿ ಬಂದಿದ್ದು, ಅದು ಮೇಕೆ ಮಾಂಸವೇ ಹೊರತು ಬೇರೆ ಯಾವುದೇ ಪ್ರಾಣಿಯ ಮಾಂಸವಲ್ಲ ಎಂದು ವರದಿ ತಿಳಿಸಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Discussion about this post