ಬೆಂಗಳೂರು : ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಪೇದೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ FIR ದಾಖಲಾಗಿದೆ.
ನಗರದ ಉಪ್ಪಾರ ಪೇಟೆಯ ಠಾಣೆಯಲ್ಲಿ ದಾಖಲಾಗಿದ್ದು, ಐಪಿಸಿ ಸೆಕ್ಷನ್ 323, ಮತ್ತು ಐಪಿಸಿ 353ರ ಅಡಿ ಪ್ರಕರಣ ದಾಖಲಾಗಿದೆ.

ಹೋಮ್ ಗಾರ್ಡ್ ಅಂಬಿಕಾ ಅವರು ನೀಡಿದ ದೂರಿನ ಅನ್ವಯ FIR ದಾಖಲಾಗಿದ್ದು, ಕರ್ತವ ನಿರತರಾಗಿದ್ದ ಸಂದರ್ಭದಲ್ಲಿ ಶಾಸಕಿ ಹಲ್ಲೆ ಮಾಡಿದ್ದಾರೆ ಎಂದು ಅಂಬಿಕಾ ದೂರು ನೀಡಿದ್ದರು.
ಈ ನಡುವೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕಿ ಸೌಮ್ಯ ರೆಡ್ಡಿ ಕ್ಯಾಟ್ ವಾಕ್ ಮಾಡಿದ್ದಾರೆ.

ಬೆಂಗಳೂರಿನ ಲಲಿತ್ ಅಶೋಕ್ ಹೋಟೇಲ್ ನಲ್ಲಿ ನಡೆಯುತ್ತಿರುವ ಪಾರಂಪರಿಕ ಅಭರಣಗಳ ಮಾರಾಟ ಹಾಗೂ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಬಳಿಕ ಅವರು ramp ಮೇಲೆ ಹೆಜ್ಜೆ ಹಾಕಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಈ ಕಾರ್ಯಕ್ರಮದ ರಾಯಭಾರಿಯಾಗಿದ್ದು, ಕೆಲವೊಂದು ವಿವಾದಗಳ ಕಾರಣದಿಂದ ಅವರು ಗೈರು ಹಾಜರಾಗಿದ್ದರು.

Discussion about this post