crossorigin="anonymous"> ವೀಕೆಂಡ್ ಲಾಕ್ ಡೌನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಜನಾಕ್ರೋಶಕ್ಕೆ ಮಣಿದ ಸಿಎಂ ಬೊಮ್ಮಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವೀಕೆಂಡ್ ಲಾಕ್ ಡೌನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಜನಾಕ್ರೋಶಕ್ಕೆ ಮಣಿದ ಸಿಎಂ ಬೊಮ್ಮಾಯಿ

Radhakrishna Anegundi by Radhakrishna Anegundi
21-01-22, 3 : 36 pm
in ರಾಜ್ಯ
bommai meeting
Share on FacebookShare on TwitterWhatsAppTelegram

ಬೆಂಗಳೂರು :  ಕೊರೋನಾ ಮೂರನೇ ಅಲೆ ನಿಯಂತ್ರಣ ಸಲುವಾಗಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಜನರಿಗೆ ಭಾರವಾಗಿದೆ. ಅದರಲ್ಲೂ ದುಡಿದು ತಿನ್ನುವ ಮಂದಿಗೆ ವಾರಾಂತ್ಯದ ಕರ್ಫ್ಯೂ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಜನ ತಿರುಗಿ ಬಿದ್ದಿದ್ದರು. ಅದರಲ್ಲೂ ಲಾಕ್ ಡೌನ್ ವಿಧಿಸಲು ಸಲಹೆ ಕೊಟ್ಟ ತಜ್ಞರಿಗೆ ಜನ ಹಿಡಿ ಶಾಪ ಹಾಕಿದ್ದರು. ಇನ್ನು ಜನರ ಆಕ್ರೋಶಕ್ಕೆ ದನಿಗೂಡಿಸಿದ ಬಿಜೆಪಿ ನಾಯಕರು ಸಿಎಂ ಬೊಮ್ಮಾಯಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದರು.

ಇನ್ನು ಒಂದು ಹೆಜೆ ಮುಂದೆ ಹೋಗಿದ್ದ ಹೋಟೆಲ್ ಮಾಲೀಕರು ಈ ವಾರದ ಕರ್ಫ್ಯೂ ಉಲ್ಲಂಘಿಸಲು ನಿರ್ಧರಿಸಿದ್ದರು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನಾಕ್ರೋಶಕ್ಕೆ ಮಣಿದಿದ್ದು, 2 ವಾರಗಳಿಂದ ಜಾರಿಯಲ್ಲಿದ್ದ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವ ಆರ್ ಅಶೋಕ್, ಡಾ.ಕೆ.ಸುಧಾಕರ್, ಅರಗ ಜ್ಞಾನೇಂದ್ರ ಭಾಗವಹಿಸಿದ್ದರು.

ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ತಜ್ಞರು ಸಂಪೂರ್ಣ ಸಹಮತ ವ್ಯಕ್ತಪಡಿಸಿಲ್ಲ ಅನ್ನಲಾಗಿದ್ದು, ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಕೊರೋನಾ ಸೋಂಕಿನ ಪ್ರಸರಣ ವೇಗ ಹಾಗೂ ಸೋಂಕಿತರ ಸಂಖ್ಯೆ ನಿರೀಕ್ಷೆಗೂ ಮೀರಲಿದೆ ಎಂದು ಎಚ್ಚರಿಸಿದ್ದಾರೆ. ಹಾಗಂತ ವೀಕೆಂಡ್ ಲಾಕ್ ಡೌನ್ ತೆರವು ಎಂದು ಸಂಭ್ರಮಪಡಬೇಕಾಗಿಲ್ಲ. ನೈಟ್ ಕರ್ಫ್ಯೂ ಎಂದಿನಂತೆ ಜಾರಿಯಲ್ಲಿರುತ್ತದೆ ಜೊತೆಗೆ ಮತ್ತಷ್ಟು ಕಠಿಣ ನಿಬಂಧನೆಗಳು ಇನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದೆ

Tags: CoronaFEATURED
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್