crossorigin="anonymous"> ರಾಜ್ಯದ ವಿವಿಧೆಡೆ ಪ್ರಜಾಪ್ರಭುತ್ವ ದಿನಾಚರಣೆ - ಮಾನವ ಸರಪಳಿ ನಿರ್ಮಾಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜ್ಯದ ವಿವಿಧೆಡೆ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಸರಪಳಿ ನಿರ್ಮಾಣ

The human chain is planned from Bidar to Chamarajanagar, covering all 31 districts of Karnataka

Radhakrishna Anegundi by Radhakrishna Anegundi
15-09-24, 8 : 03 pm
in ಟಾಪ್ ನ್ಯೂಸ್, ರಾಜ್ಯ
jarakiholi lakshmi
Share on FacebookShare on TwitterWhatsAppTelegram

ರಾಜ್ಯ ಸರ್ಕಾರದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸಮಾನತೆ, ಭಾತೃತ್ವದ ಸಂವಿಧಾನದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತುಮಕೂರಿನಲ್ಲಿ ತಿಳಿಸಿದ್ದಾರೆ.ಮಾನವ ಸರಪಳಿಯಲ್ಲಿ ರಾಜ್ಯದ ವಿವಿಧೆಡೆ ೨೫ ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಯಾಗಿದೆ ಎಂದು ತೋರಿಸಿದ್ದಾರೆ ಎಂದರು.

parameshwar 2

ಬೆಳಗಾವಿ ಜಿಲ್ಲೆಯಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರ ತಾಲೂಕಿನ ತೇಗೂರ ಗ್ರಾಮದವರೆಗೆ ೧೪೫ ಕಿ.ಮೀ ಮಾನವ ಸರಪಳಿ ನಿರ್ಮಿಸಿ ಮಾನವ ಬಂಧುತ್ವ ಯಶಸ್ವಿಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿದರು.

ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ ಸಂವಿಧಾನವೇ ಕಾರಣ ಎಂದು ತಿಳಿಸಿದ್ದಾರೆ.

jarakiholi

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ೧೪೫ ಕಿಲೋಮೀಟರ್ ಉದ್ದದ ಮಾನವ ಸರಪಳಿಯಲ್ಲಿ ನಿರ್ಮಿಸಲಾಗಿದ್ದು, ಒಂದೂವರೆ ಲಕ್ಷ ಜನರು  ಭಾಗವಹಿಸಿದ್ದರು.  ಮೊಳಕಾಲ್ಮೂರು ತಾಲೂಕಿನ ಮೇಲಿಕ ಕಣಿವೆ ಗ್ರಾಮದಿಂದ ಚಳ್ಳಕೆರೆ ಮಾರ್ಗವಾಗಿ ಹಿರಿಯೂರಿನ  ಜವಗೊಂಡನಹಳ್ಳಿ ಗ್ರಾಮದವರೆಗೂ ಮಾನವ ಸರಪಳಿ ರಚಿಸಲಾಗಿತ್ತು.

 ವಿಜಯಪುರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ರಚಿಸಿದ್ದ ಮಾನವ ಸರಪಳಿಯಲ್ಲಿ  ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 ಚಿಕ್ಕಮಗಳೂರು ಜಿಲ್ಲೆಯ ಮಾಗಡಿ ಕೈಮರ ಗ್ರಾಮದಿಂದ ತರೀಕೆರೆ ತಾಲೂಕು ಎಂ.ಸಿ ಹಳ್ಳಿವರಗೆ ಸುಮಾರು ೯೨ ಕಿಲೋಮೀಟರ್ ಉದ್ದದ ಮಾನವ ಸರಪಳಿ ಹಮ್ಮಿಕೊಳ್ಳಲಾಗಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ೪೬ ಕಿಲೋ ಮೀಟರ್ ಉದ್ದ ಬೃಹತ್ ಮಾನವ ಸರಪಳಿ ರಚಿಸಲಾಗಿತ್ತು.

ಸಂಡೂರು ತಾಲೂಕಿನ  ಕುರೆಕುಪ್ಪದಿಂದ  ಚಿತ್ರದುರ್ಗ ಜಿಲ್ಲೆಯ ಮೇಲಿನ ಕಣವೆ ಗ್ರಾಮದವರೆಗೆ ೩೫ ಸಾವಿರಕ್ಕೂ ಹೆಚ್ಚು ಜನರು ಮಾನವ ಸರಪಳಿ ರಚಿಸಿದ್ದರು. ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಯಶವಂತ್ ವಿ ಗುರುಕಾರ್ ಉದ್ಘಾಟಿಸಿದರು. ಭಾರತದ ಸಂವಿಧಾನ ಪೀಠಿಕೆಯನ್ನು  ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಬೋಧಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ  ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನಾಡಿನ ಜನರು ಕೈ ಜೋಡಿಸಿದಾಗ ಮಾತ್ರ ರಾಜ್ಯ, ರಾಷ್ಟ್ರ  ಪ್ರಗತಿ ಹೊಂದಲು ಸಾಧ್ಯ ಎಂದು ಆಭಿಪ್ರಾಯಪಟ್ಟಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ೧೩೦ ಕಿಮೀ ಉದ್ದದ ಮಾನವ ಸರಪಳಿ ರಚಿಸಿ ಸಂವಿಧಾನದ ಮಹತ್ವವನ್ನು ಸಾರಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಜಮಾಡಿ ಟೋಲ್‌ಗೇಟ್‌ನಿಂದ ಸುಳ್ಯದ ಸಂಪಾಜೆ ಗೇಟ್‌ವರೆಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸಂವಿಧಾನದ ಪೀಠಿಕೆಯ ಪ್ರಮಾಣ ಸ್ವೀಕರಿಸಿ, ಮಾನವ ಸರಪಳಿ ರಚಿಸಿ ದೇಶದ ಸಮಗ್ರತೆ ಮತ್ತು ಏಕತೆಯನ್ನು ಸಾರಿದರು.

ಮೈಸೂರಿನಲ್ಲಿ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಬೆಳಿಗ್ಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಮಹೋತ್ಸವದ 13 ಆನೆಗಳನ್ನು ಕೂಡ ಸಾಲಿನಲ್ಲಿ ನಿಲ್ಲಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ವಿಶೇಷ ಮೆರುಗು ನೀಡಲಾಗಿತ್ತು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್