ಕ್ಷಣದಿಂದ ಕ್ಷಣಕ್ಕೆ ಚೀನಾದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಇದೀಗ ವೈರಸ್ ಗೆ ಬಲಿಯಾದವರ ಸಂಖ್ಯೆ 100ರ ಗಡಿ ದಾಟಿದೆ. ಇನ್ನೂ 1300ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ.
ಈ ನಡುವೆ ಚೀನಾದಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಿದೆ. ಚೀನಾದ ಹುಬೈ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಕಂಡುಬಂದಿರುವುದರಿಂದ ಅಲ್ಲಿನ ಭಾರತೀಯರನ್ನು ಸ್ಥಳಾಂತರಿಸಲು ಸಿದ್ಧತೆ ನಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ
ಹುಬೆ ಪ್ರಾಂತ್ಯದಿಂದ ಭಾರತೀಯರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೀಜಿಂಗ್ ನಲ್ಲಿರುವ ಭಾರತೀಯ ರಾಯಬಾರಿಗಳು ಚೀನಾ ಸರ್ಕಾರ, ಆಡಳಿತ ಸಂಸ್ಥೆ ಮತ್ತು ಪ್ರಜೆಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಚೀನಾದ ವುಹಾನ್ ಮತ್ತಿತರ 17 ಕಡೆಗಳಲ್ಲಿ ಈ ಸೋಂಕು ಹೆಚ್ಚಾಗಿದೆ. 250 ರಿಂದ 300 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ವುಹಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Discussion about this post