crossorigin="anonymous"> prostitution in Bengaluru : ರಾಜಧಾನಿಯಲ್ಲಿ ಮತ್ತೆ ಸ್ಟಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ :  ಪೊಲೀಸ್ ಠಾಣೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಬೇಕಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

prostitution in Bengaluru : ರಾಜಧಾನಿಯಲ್ಲಿ ಮತ್ತೆ ಸ್ಟಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ :  ಪೊಲೀಸ್ ಠಾಣೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಬೇಕಾ

ಗೃಹ ಸಚಿವರೇ ವೇಶ್ಯಾವಾಟಿಕೆ ಅಡ್ಡೆಗಳ ಕಾರಣದಿಂದ ಅದೆಷ್ಟು ಯುವಜನತೆ ಹಾಳಾಗುತ್ತಿದ್ದಾರೆ ಗೊತ್ತಾ

Radhakrishna Anegundi by Radhakrishna Anegundi
12-07-22, 9 : 19 pm
in ಕ್ರೈಮ್
prostitution-in-bengaluru-ccb-bust-prostitution-rackets-in-bengaluru-salons
Share on FacebookShare on TwitterWhatsAppTelegram

ಬೆಂಗಳೂರು : ರಾಜಧಾನಿಯಲ್ಲಿ ಮತ್ತೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ( prostitution in Bengaluru ) ಪ್ರಾರಂಭವಾಗಿದೆ. ಅಕ್ರಮವಾಗಿ ತಲೆ ಎತ್ತುವ ಈ ಸ್ಫಾಗಳಿಗೆ ಸ್ಥಳೀಯ ಪೊಲೀಸ್ ಠಾಣೆಯ ಕೃಪಾಕಟಾಕ್ಷವಿರುತ್ತದೆ. ಠಾಣಾ ವ್ಯಾಪ್ತಿಯಲ್ಲಿ ಏನಿದೆ ಏನಿಲ್ಲ ಎಂದು ಅರಿಯದಷ್ಟು ದಡ್ಡರಲ್ಲ ಠಾಣೆಯ ಇನ್ಸ್ ಪೆಕ್ಟರ್ ಗಳು. ಗೃಹ ಸಚಿವರು ಇಚ್ಛಾ ಶಕ್ತಿ ತೋರಿದ್ರೆ ಖಂಡಿತಾ ಈ ದಂಧೆಗೆ ಬ್ರೇಕ್ ಹಾಕಲು ಸಾಧ್ಯವಿದೆ.

ಹೀಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ( prostitution in Bengaluru ) ನಡೆಸುತ್ತಿದ್ದ ಗಿರಾಕಿ ಕೇಂದ್ರಗಳಿಗೆ ಸಿಸಿಬಿ ಪೊಲೀಸರು ದಾಳಿ ಮಾಡಿ 4 ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ 8 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.

ಇಂದಿರಾನಗರದ 100 ಅಡಿ ರಸ್ತೆಯ ನೆಸ್ಟ್ ಟು ಗ್ಲೇನ್ ಬೇಕ್ ಹೌಸ್ ಬಳಿ ಇರುವ ಐರಾ ಸ್ಪಾ ಅಂಡ್ ವೆಲ್ ನೆಸ್ ಸೆಂಟರ್ ತೆರೆದು ಹೊರ ರಾಜ್ಯದ ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಜಾಲವನ್ನು ಬೇಧಿಸಿರುವ ಪೊಲೀಸರು ಆರೋಪಿಗಳಾದ ರೂಬಿ ಮತ್ತು ನಿರಂಜನ್ ಎಂಬವರನ್ನು ಬಂಧಿಸಿದ್ದಾರೆ. ಇಲ್ಲಿ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.

ಇದನ್ನು ಓದಿ : Car theft : ವೇಶ್ಯಯರ ಸಂಗಕ್ಕಾಗಿ ಕಾರು ಕದಿಯುತ್ತಿದ್ದ ಖದೀಮನ ಬಂಧನ

ಮತ್ತೊಂದು ಪ್ರಕರಣದಲ್ಲಿ ಜೆಪಿ ನಗರದ 5ನೇ ಹಂತದಲ್ಲಿ ರೂಹಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರೋಪಿಗಳಾದ ಶರೀಫ್ ಹಾಗೂ ರಾಜಶೇಖರ್ ಅನ್ನುವವರನ್ನು ಬಂಧಿಸಿದ್ದಾರೆ. ಇಲ್ಲೂ ರಾಜ್ಯ ಹಾಗೂ ವಿದೇಶದ 4 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.

ಈ ಎರಡೂ ಪ್ರಕರಣಗಳನ್ನು ಗಮನಿಸಿದರೆ ಸಿಸಿಬಿ ದಾಳಿ ಮಾಡಿದ ಬಳಿಕ ದಂಧೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸ್ ಠಾಣೆಗಳಿಗೆ ಹಾಗಾದ್ರೆ ಈ ದಂಧೆಯ ಬಗ್ಗೆ ಮಾಹಿತಿ ಇರಲಿಲ್ವ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ, ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಸ್ಥಳೀಯ ಪೊಲೀಸ್ ಇನ್ಸ್ ಪೆಕ್ಟರ್ ಗೆ ಗೊತ್ತಿಲ್ಲ ಅಂದ್ರೆ ಅದು ಕರ್ತವ್ಯಲೋಪವಾಗೋದಿಲ್ವ ಗೃಹ ಸಚಿವರೇ ಇದಕ್ಕೆ ಉತ್ತರಿಸಬೇಕು.

ನಳಿನ್ ಕುಮಾರ್ ಕಟೀಲು ಅವರಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆಯಂತೆ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಸೇರಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶಿಸಲಾಗಿದೆ. ಮಾಹಿತಿಗಳ ಪ್ರಕಾರ ಹೊಸ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಈಗಾಗಲೇ ಹೊಸಬರ ನೇಮಕಕ್ಕೆ ಪಟ್ಟಿ ಸಿದ್ಧವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಕ್ ಕೊಟ್ಟಿದ್ದಾರೆ. ಮೈಸೂರು ಎಲೆಕ್ಟ್ರಿಕಲ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಸಂತೋಷ್‌ ರೈ ಬೋಳಿಯಾರ್‌ ಅವರನ್ನೂ ಇದೀಗ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯುಟಿ ಖಾದರ್ ವಿರುದ್ಧ ಸ್ಪರ್ಧಿಸಿದ್ದ ಬೋಳಿಯಾರ್, ದೊಡ್ಡ ಮಟ್ಟಿಗೆ ಫೈಟ್ ಕೊಟ್ಟಿದ್ದರು. ಹಿಂದುತ್ವದ ವಿಷಯದಲ್ಲಿ ದಕ್ಷಿಣ ಕನ್ನಡದ ಉಳಿದ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪ್ರಚಾರ ಮಾಡಿದ್ರೆ, ಸಂತೋಷ್ ಕುಮಾರ್ ಬೋಳಿಯಾರ್ ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಚಾರ ನಡೆಸಿದ್ದರು. ಅಲ್ಪಸಂಖ್ಯಾತರ ಮತ ಪಡೆಯವಲ್ಲಿ ಬೋಳಿಯಾರ್ ಯಶಸ್ವಿಯೂ ಆಗಿದ್ದರು.

ಮೈಸೂರು ಎಲೆಕ್ಟ್ರಿಕಲ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಧ್ಯಕ್ಷರಾದ ಬಳಿಕ ಆಲ್ಲಿನ CRS Fund ಅನ್ನು ತಾವು ಸೋತ ಕ್ಷೇತ್ರಕ್ಕೆ ತರಿಸಿಕೊಂಡು  ಮುಂಬರುವ ಚುನಾವಣೆಗೆ ಸಿದ್ದತೆಗಳನ್ನೂ ನಡೆಸಿದ್ದರು. ನಳಿನ್ ಕುಮಾರ್ ಕಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರ ಅಧಿಕಾರ ಕಿತ್ತುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್