ಮುಂಬೈ : ನೀಲಿ ಚಿತ್ರ ದಂಧೆಯಲ್ಲಿ ತೊಡಗಿದ್ದಾರೆ ಅನ್ನುವ ಆರೋಪ ಎದುರಿಸುತ್ತಿರುವ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮುಂಬೈನ ಕಿಲಾ ನ್ಯಾಯಾಲಯ ಆದೇಶಿಸಿದೆ.
ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಮತ್ತು ರಯಾನ್ ಥೋರ್ಪ್ ಅವರ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನಡೆದ ವಾದ-ಪ್ರತಿವಾದಗಳ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಜುಲೈ 19ರಂದು ರಾಜ್ ಕುಂದ್ರಾನನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಒಳಪಡಿಸಬೇಕಿದ್ದು, 7 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಳ್ಳಿ ಹಾಕಿದ ನ್ಯಾಯಾಧೀಶರು ಮತ್ತೆ 14 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ್ದಾರೆ.
ಜುಲೈ 19 ರಿಂದ ಬಂಧನದಲ್ಲಿರುವ ಕುಂದ್ರಾ ಅವರ ಪೊಲೀಸ್ ಕಸ್ಟಡಿಯನ್ನು ಜುಲೈ 27 ರವರೆಗೆ ಮುಂಬೈನ ನ್ಯಾಯಾಲಯ ಈ ಹಿಂದೆ ವಿಸ್ತರಿಸಿತ್ತು.

Discussion about this post