ಮಂಗಳೂರು : ಶುಕ್ರವಾರ ರಾತ್ರಿ ಚಂದ್ರದರ್ಶನವಾಗದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಆಚರಿಸುವಂತೆ ಖಾಝಿಗಳು ಸೂಚನೆ ನೀಡಿದ್ದಾರೆ.
ಮಂಗಳೂರಿನ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಮ್ಮ ಜಿಲ್ಲೆಯ ಜನತೆಗೆ ಭಾನುವಾರ ಹಬ್ಬ ಆಚರಿಸುವಂತೆ ಕರೆ ಕೊಟ್ಟಿದ್ದಾರೆ.
ಈ ನಡುವೆ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವ ಕಾರಣ ಸಡಿಲಿಕೆ ನೀಡಬೇಕು ಎಂದು ಈಗಾಗಲೇ ಹಲವಾರು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಉಭಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
Discussion about this post