ದೆಹಲಿ, ಗೋವಾ, ಮುಂಬೈ ನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದ್ದಾರೆ
ರಾಜ್ಯದ ಜನತೆಯ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿರಿಸಿಕೊಂಡು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಅವರು, ದೆಹಲಿ, ಗೋವಾ, ಮುಂಬೈ ನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ಸುತ್ತಮುತ್ತ ಏಳೆಂಟು ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.

2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗುವುದು. ಈಗಾಗಲೇ ಹಲವು ಮುಖಂಡರು ತಮ್ಮ ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಭವಿಷ್ಯದ ಬೆಂಗಳೂರನ್ನು ಗಮನದಲ್ಲಿರಿಸಿಕೊಂಡು ಸೂಕ್ತ ಸ್ಥಳ ಆಯ್ಕೆ ಮಾಡಲಾಗುವುದು ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತರ್ಜಲ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀಲಗಿರಿ ಬೆಳೆಯಲು ಅವಕಾಶವಿಲ್ಲ. ಹೀಗಾಗಿ ವೈಜ್ಞಾನಿಕ ವರದಿ ಆಧರಿಸಿ ನೀಲಿಗಿರಿ ಬೆಳೆಯುವುದನ್ನು ನಿಷೇಧಿಸಲಾಗಿದೆ. ಮಾಹಿತಿ ಕೊರತೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ನೀಲಗಿರಿ ಬೆಳೆದಿದ್ದರೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
The proposed second airport in Bengaluru is expected to be located within 50 to 60 km from the city. Industries Minister M.B. Patil said that seven to eight locations, including Tumakuru Road, Mysuru Road, Kunigal Road and Kanakapura Road are being considered based on load factor and connectivity
Discussion about this post