ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟ SSLC ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಪರೀಕ್ಷೆ ನಡೆಸಲು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನೇ ಗುರಿಯಾಗಿರಿಸಿ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವಂತೆ ಇಲಾಖೆಯ ಎಲ್ಲಾ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದ್ದು, ಪರೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿಗಳು ಕಡ್ಡಾಯ ಲಸಿಕೆ ಪಡೆದುಕೊಂಡಿರಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರತೀ ಪರೀಕ್ಷಾ ಕೇಂದ್ರದ ಕೊಠಡಿ, ಶೌಚಾಲಯ ಸೇರಿ ಕೇಂದ್ರದ ಆವರಣದಲ್ಲಿ ಪರೀಕ್ಷೆಗೆ ಮುನ್ನ ಹಾಗೂ ನಂತರ ಸ್ಯಾನಿಟೈಸ್ ಕಡ್ಡಾಯ
ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆಯಂತೆ ಒಂದು ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ.
ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಮತ್ತು ಪರೀಕ್ಷೆ ಕೊಠಡಿಗಳಲ್ಲಿ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಬೇಕು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನೀರಿನ ಬಾಟಲಿ ತರಲು ಅವಕಾಶ. ವಿದ್ಯಾರ್ಥಿಗಳ ಬೇಡಿಕೆ ಇದ್ದರೆ ಆಹಾರದ ಡಬ್ಬಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶ.
ಕೆಮ್ಮು, ನೆಗಡಿ,ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಗಳನ್ನು ವಿಶೇಷ ಕೊಠಡಿ ಅನ್ನೋ ಹೆಸರಿನಲ್ಲಿ ಕಾಯ್ದಿರಿಸಬೇಕು
ಪರೀಕ್ಷಾ ಕೇಂದ್ರ ಪ್ರವೇಶ ಮಾಡುತ್ತಿದ್ದಂತೆ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಗೆ ಕೌಂಟರ್ ನಿರ್ಮಿಸಬೇಕು
ವಿದ್ಯಾರ್ಥಿಗಳ ಪರೀಕ್ಷೆ ಸಲುವಾಗಿ ಥರ್ಮಲ್. ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವುದು ಕಡ್ಡಾಯ
ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲಿ ಮಾಸ್ಕ್ ವಿತರಣೆ ಮಾಡಬೇಕು, ಹಾಗೂ ಹ್ಯಾಂಡ್ ಸ್ಯಾನಿಟೈಸರನ್ನು ಪ್ರತಿ ವಿದ್ಯಾರ್ಥಿಗಳಿಗೆ ಮಾಡಬೇಕು.
ಆರೋಗ್ಯ ಕೌಂಟರ್‌ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ.
Discussion about this post