ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಜೈತ್ರ ಯಾತ್ರೆ ಮುಂದುವರಿದಿದೆ. ಪದಕಗಳ ಪದಕ ಬಾಚಿಕೊಳ್ಳುತ್ತಿರುವ ಭಾರತದ ಕ್ರೀಡಾಪಟುಗಳು ಚಿನ್ನ ಬೆಳ್ಳಿಯ ಮೇಲೆಯೇ ಕಣ್ಣಿಟ್ಟಿದ್ದಾರೆ. ಅದರಲ್ಲೂ ಶೂಟಿಂಗ್ ನಲ್ಲಿ ದಾಖಲೆ ಬರೆಯಲಾಗಿದ್ದು ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕ ಬಾಚಿದರೆ, ಸಿಂಗರಾಜ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.
ಈ ಮೂಲಕ ಭಾರತದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ. ಇದಕ್ಕೂ ಮುನ್ನ ಮಂಗಳವಾರ ಮುಕ್ತಾಯವಾದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್ 1 ಪಂದ್ಯದಲ್ಲಿ ಭಾರತದ ಶೂಟರ್ ಸಿಂಗರಾಜ್ ಅಧಾನ್ ಕಂಚಿನ ಪದಕ ಗೆದ್ದುಕೊಂಡಿದ್ದರು
ಭಾರತದ ಶೂಟರ್ ಗಳ ಸಾಧನೆಯನ್ನು ಕೊಂಡಾಡಿರುವ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
Discussion about this post