ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ ಅಪೋಲೋ ಆಸ್ಪತ್ರೆಗೆ ದಾಖಲು
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡುತ್ತಿದ್ದ ವೇಳೆ ಮೂಗಿನಿಂದ ದಿಢೀರ್ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಗೊಂಡ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿಬ್ಬಂದಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪ್ರಸ್ತುತ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯರು ಕುಮಾರಸ್ವಾಮಿಯವರ ತಪಾಸಣೆ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಟಿಯಲ್ಲಿ ಕುಮಾರಸ್ವಾಮಿಯವರೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
Discussion about this post