ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ನಿಧನ ಹೊಂದಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೆಲ ದಿನಗಳ ಹಿಂದೆ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹೀಗಾಗಿಯೇ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎಂದೇ ಕರೆಯಲಾಗುತ್ತಿತ್ತು.
1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.
Discussion about this post