ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ನೇಮಕವಾಗಿದ್ದಾರೆ.
1985ರ ಬ್ಯಾಚ್ನ ಗುಜರಾತ್ ಕೇಡರ್ ಅಧಿಕಾರಿಯಾಗಿದ್ದ ಮುರ್ಮುಕೇಂದ್ರ ಹಣಕಾಸು ಸಚಿವಾಲಯದಲ್ಲಿ ಎಕ್ಸ್ಪೆಂಡಿಚರ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಿಶೇಷ ಅಂದ್ರೆ ಇವರು ಪ್ರಧಾನಿ ನರೇಂದ್ರ ಮೋದಿಯವರಿಗೆ ತುಂಬಾ ಆತ್ಮೀಯರಾಗಿದ್ದು, ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಇವರು ಕಾರ್ಯನಿರ್ವಹಿಸಿದ್ದರು.
ಹಿಂದೊಮ್ಮೆ ಇವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು ಅನ್ನುವುದು ಗಮನಾರ್ಹ ಅಂಶ.
2013ರಲ್ಲಿ ಇಸ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣ ಸಂಬಂಧ ಇವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು ಎಂದು The Quint. ವರದಿ ಹೇಳಿದೆ.
ಇನ್ನು ಅದೇ ವರ್ಷ Tehelka ಕೂಡಾ ಈ ಸಂಬಂಧ ಮುರ್ಮು ಕುರಿತಂತೆ ವರದಿಯೊಂದನ್ನು ಪ್ರಕಟಿಸಿತ್ತು.
Discussion about this post